ಬೆಂಗಳೂರು- ಬೆಂಗಳೂರು ನಗರದಲ್ಲಿ ಸಮಗ್ರವಾಗಿ ರಾಜಕಾಲುವೆಯನ್ನು ಪುನರ್ನಿಮಾಣ ಮಾಡಲು ಐಐಎಸ್ ಸಿ ಸೇರಿದಂತೆ ಇತರೆ ವರದಿಗಳನ್ನು ಆಧರಿಸಿ ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯನ್ನು ಸುಧಾರಣೆಗಾಗಿ ವಿಶೇಷವಾದ ಮಾಸ್ಟರ್ ಪ್ಲಾನ್ ನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮಂಗಳವಾರ ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ “ ನಮ್ಮ ಕ್ಲಿನಿಕ್” ಉದ್ಘಾಟಿಸಿದರು ಹಾಗೂ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾಕ್ಷೇತ್ರ ವ್ಯಾಪ್ತಿಯ “ಶ್ರೀ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆ” “ […]

ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಕ್ಷೇತ್ರದ ಶಾಸಕ ಪಿ.ಟಿ. ಪರಮೇಶ್ವರ್ ನಾಯಕ್ ರವರ ಕರ್ತವ್ಯ ಲೋಪ ಕುರಿತು ಆಡಿರುವ ಮಾತಿಗೆ ಕೆಪಿಸಿಸಿಯ ಶಿಸ್ತುಪಾಲನಾ ಸಮಿತಿಯು ನೀಡಿದ್ದ ನೋಟಿಸ್‌ಗೆ ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿ ಕೆ.ಸಿ.ಕೊಂಡಯ್ಯ ಖಡಕ್ ಉತ್ತರ ನೀಡಿದ್ದಾರೆ. ಮೂರು ಪುಟಗಳ ಸುಧೀರ್ಘ ಪತ್ರದಲ್ಲಿ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ರವರಿಗೆ ಉತ್ತರ ನೀಡಿರುವ ಮಾಜಿ ಸಂಸದ ಕೆ.ಸಿ.ಕೊಂಡಯ್ಯರವರು ’ಹೂವಿನ ಹಡಗಲಿ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಪರಿಹಾರಗಳನ್ನು […]

  ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಕ್ಷೇತ್ರದ ಶಾಸಕ ಪಿ.ಟಿ. ಪರಮೇಶ್ವರ್ ನಾಯಕ್ ರವರ ಕರ್ತವ್ಯ ಲೋಪ ಕುರಿತು ಆಡಿರುವ ಮಾತಿಗೆ ಕೆಪಿಸಿಸಿಯ ಶಿಸ್ತುಪಾಲನಾ ಸಮಿತಿಯು ನೀಡಿದ್ದ ನೋಟಿಸ್‌ಗೆ ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿ ಕೆ.ಸಿ.ಕೊಂಡಯ್ಯ ಖಡಕ್ ಉತ್ತರ ನೀಡಿದ್ದಾರೆ. ಮೂರು ಪುಟಗಳ ಸುಧೀರ್ಘ ಪತ್ರದಲ್ಲಿ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ರವರಿಗೆ ಉತ್ತರ ನೀಡಿರುವ ಮಾಜಿ ಸಂಸದ ಕೆ.ಸಿ.ಕೊಂಡಯ್ಯರವರು ’ಹೂವಿನ ಹಡಗಲಿ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. […]

ಬೆಳಗಾವಿ- ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡನಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾನಾಯಕನ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಡಿ.ಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಬೇಕು. ಸಿಬಿಐ ಸಂಪೂರ್ಣವಾಗಿ ವಿಚಾರಣೆ ನಡೆಸಬೇಕು ಎಂದಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಜೀವನವನ್ನು ಹಾಳು ಮಾಡಲು […]

ಹಾಸನ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಪಕ್ಷಾಂತರಿಗಳ ವಿಚಾರ ಒಂದಡೆಯಾದರೆ ಇದೀಗ ರಾಜ್ಯದ ‘ಗೌಡ’ರ ಕುಟುಂಬ ‘ಟಿಕೆಟ್’ ವಿಚಾರದಲ್ಲಿ ಹಾದಿರಂಪ ಬೀದಿರಂಪ ಮಾಡಿಕೊಂಡಿರುವುದು ಇನ್ನೊಂದೆಡೆ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಜಿಲ್ಲೆಗಳ ಪೈಕಿ ಮೊದಲಿನಿಂದಲೂ ಹಾಸನ ಮತ್ತು ಮಂಡ್ಯ ಜಿಲ್ಲೆಗಳು ‘ಜಾತ್ಯಾತೀತ’ ಪಕ್ಷದ ಭದ್ರಕೋಟೆಯಾಗಿದೆ. ಈ ಎರಡು ಜಿಲ್ಲೆಗಳ ಮೇಲೆ ಜೆಡಿಎಸ್ ಪರಮೋಚ್ಚ ನಾಯಕರೂ ಆದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರ ಪಾರುಪತ್ಯ ಮೊದಲಿನಿಂದಲೂ ಇದೆ. ಹಾಗೆಯೇ ಅದನ್ನು ರುಜುವಾತು ಮಾಡುತ್ತಾ […]

ಬೆಂಗಳೂರು- ಬೆಂಗಳೂರು ಉದ್ಯಾನ ನಗರ ಎಂದು ಈಗಾಗಲೇ ಪ್ರಸಿದ್ಧಿಯಾಗಿದೆ. ಅಭಿವೃದ್ಧಿಯಲ್ಲಿ ಈ ಹೆಸರು ಹಿಂದೆ ಸರಿದಿದ್ದು, ಮತ್ತೊಮ್ಮೆ ಉದ್ಯಾನ ನಗರದ ಗತ ವೈಭವವನ್ನು ಮರುಕಳಿಸುವಂತೆ ಸರ್ಕಾರ ಕ್ರಮ ವಹಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‌ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ – ೨೦೨೩ ಉದ್ಘಾಟಿಸಿದ […]

ಬೆಂಗಳೂರು- ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿರಿಯ ಪಂಚಮಸಾಲಿ ಸ್ವಾಮೀಜಿಗಳು ಈ ವಿಚಾರದಲ್ಲಿ ’ಪಂಚಮಸಾಲಿ ಸಮುದಾಯ ಸಿಎಂ ಬೊಮ್ಮಾಯಿ ಮೇಲೆ ನಂಬಿಕೆ ಕಳೆದುಕೊಂಡಿದೆ’ ಎಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಭಾರೀ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮುದಾಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲಿನ […]

      ಬೆಂಗಳೂರು- ಚಿಲುಮೆ ಸಂಸ್ಥೆ ನಡೆಸಿದ ಮತದಾರರ ಮಾಹಿತಿ ಕಳವು ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಯಾಸ್ಟ್ ಮಾಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಈ ಕುರಿತು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಮೂಲಕ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳ್ಳತನದ ಆರೋಪವನ್ನು ಡೈವರ್ಟ್ ಮಾಡಲು ಹೊರಟಿದ್ದೀರಾ? ಭಯೋತ್ಪಾದಕ ಎಲ್ಲಿಂದ ಬಂದ? ಘಟನೆ ಆದ […]

ಬೆಂಗಳೂರು- ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ 2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು […]

  ಬೆಂಗಳೂರು- ಕರ್ನಾಟಕದ ವಿವಿಧ ರೈಲು ಯೋಜನೆಗಳಿಗೆ ಒಂದು ವರ್ಷದಲ್ಲಿ ದಾಖಲೆ ಮೊತ್ತದ ಅನುದಾನ ನೀಡಲಾಗಿದೆ. ಲೋಕಸಭೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನಲ್ಲಿ ರಾಜ್ಯದ ರೈಲು ಯೋಜನೆಗಳಿಗೆ 6091 ಕೋಟಿ ರೂ. ಹಣ ನೀಡಲಾಗಿದೆ. 2009-14ಕ್ಕೆ ಹೋಲಿಕೆ ಮಾಡಿದರೆ ಇದು ೬ ಪಟ್ಟು ಹೆಚ್ಚಾಗಿದೆ ಎಂದು ಸಚಿವರು ಸಂಸದರ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಈ ಉತ್ತರದ ಮೂಲಕ ರಾಜ್ಯದ ರೈಲು […]

Wordpress Social Share Plugin powered by Ultimatelysocial