ಮಂಗಳೂರು- ಶ್ರೀಕ್ಷೇತ್ರ ಧರ್ಮಸ್ಥಳ ಅಂದರೆ ಅದು ಧರ್ಮದ ನೆಲೆವೀಡು. ಭಕ್ತ ಕೋಟಿಯ ಆರಾಧನಾ ತಾಣ. ಬೇಡಿದ ಬಯಕೆ ಈಡೇರಿಸುವ ಮಂಜುನಾಥ. ಹೀಗೆ ಕೋಟಿ ಕೋಟಿ ಭಕ್ತರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಾರೆ. ಹಬ್ಬ, ಹರಿದಿನ, ಜನುಮದಿನ, ಮದುವೆಯ ಕಾರ್ಯ ಎಲ್ಲದಕ್ಕೂ ಶ್ರೀ ಕ್ಷೇತ್ರವನ್ನೇ ಆರಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಕ್ಷೇತ್ರವೂ ಕೂಡ ಸಾಮಾಜಿಕ ಕೆಲಸಗಳಿಂದ ಹೆಸರುವಾಸಿಯಾಗಿದೆ. ಅದರಲ್ಲೂ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡುವ ಮಂಜುನಾಥನೆಂದೇ ಹೆಸರುವಾಸಿಯಾಗಿದ್ದಾರೆ. ಕ್ಷೇತ್ರದ ಚತುರ್ದಾನ ಪರಂಪರೆಯನ್ನು ಪಾಲಿಸಿಕೊಂಡು […]