ಬೆಂಗಳೂರು- ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ (Namma Clinic) ಆರಂಭಿಸಲಾಗಿತ್ತು. ಈ ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಅಕ್ಟೋಬರ್ ಅಂತ್ಯಕ್ಕೆ ನಮ್ಮ ಕ್ಲಿನಿಕ್ ಸಂಪೂರ್ಣ ರಾಜ್ಯದಲ್ಲಿ ಸಂಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ […]

ಬೆಂಗಳೂರು- ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಸಚಿವರು ವಿವರಿಸಿದರು. ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, […]

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೂ ಹರಡುತ್ತಿದೆ. ಇದರಿಂದ ಪೋಷಕರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ ಈಗಾಗಲೇ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಕೋವಿಡ್‌ನಿಯಮಗಳನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುತ್ತಿದ್ದರೂ ಸೋಂಕು ಕಾಣಿಸಿಕೊಳ್ಳುತ್ತಿದೆ. 322 ವಿದ್ಯಾರ್ಥಿಗಳಿಗೆ ಸೋಂಕು: ಇದುವರೆಗೂಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು 322 ಮಂದಿ ವಿದ್ಯಾರ್ಥಿಗಳಿಗೆಸೋಂಕು ಕಾಣಿಸಿಕೊಂಡಿದೆ. ಈಗಾಗಲೇ ಕೆಲವು ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಇನ್ನೂ […]

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಅಪಾರ್ಟ್‌ಮೆಂಟ್‌ಗಳಿಗೆ ಬಿಬಿಎಂಪಿ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಜಿಮ್‌ಗಳು, ಈಜುಕೊಳಗಳು ಮತ್ತು ಇತರ ಕ್ರೀಡಾ ಸೌಲಭ್ಯಗಳನ್ನು ಮತ್ತೊಮ್ಮೆ ಬಂದ್ ಮಾಡಿಸಲಾಗುತ್ತಿದೆ. ಕಳೆದ 10 ದಿನಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಸೋಂಕು ಹೆಚ್ಚಳ ಹಿನ್ನೆಲೆ ಸಮುದಾಯ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಕಸರತ್ತು ನಡೆಸಿ ಹಲವು ಸಲಹೆಗಳನ್ನು ಪಾಲಿಸಲು ಮನವಿ […]

ದೇಶದಲ್ಲಿ ಪ್ರಾರಂಭವಾದ 15-18 ವರ್ಷದ ಮಕ್ಕಳ ಲಸಿಕೀಕರಣ ಯಶಸ್ವಿಯಾಗಿ ನಡೆಯುತ್ತಿದ್ದು, ಕೇವಲ 11 ದಿನಗಳಲ್ಲಿ 3.14 ಕೋಟಿಗೂ ಹೆಚ್ಚು ಮಕ್ಕಳು ಲಸಿಕೆ ಪಡೆದಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಸರ್ಕಾರ ಶೇ.80ರಿಂದ 85ರಷ್ಟು ಮಕ್ಕಳಿಗೆ ಅಂದ್ರೆ 7.40 ಕೋಟಿ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ. ಈಗಿನ ವರದಿಯಂತೆ 3,14,84,269 ಮಕ್ಕಳು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, […]

Wordpress Social Share Plugin powered by Ultimatelysocial