ಹಾಸನ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಪಕ್ಷಾಂತರಿಗಳ ವಿಚಾರ ಒಂದಡೆಯಾದರೆ ಇದೀಗ ರಾಜ್ಯದ ‘ಗೌಡ’ರ ಕುಟುಂಬ ‘ಟಿಕೆಟ್’ ವಿಚಾರದಲ್ಲಿ ಹಾದಿರಂಪ ಬೀದಿರಂಪ ಮಾಡಿಕೊಂಡಿರುವುದು ಇನ್ನೊಂದೆಡೆ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಜಿಲ್ಲೆಗಳ ಪೈಕಿ ಮೊದಲಿನಿಂದಲೂ ಹಾಸನ ಮತ್ತು ಮಂಡ್ಯ ಜಿಲ್ಲೆಗಳು ‘ಜಾತ್ಯಾತೀತ’ ಪಕ್ಷದ ಭದ್ರಕೋಟೆಯಾಗಿದೆ. ಈ ಎರಡು ಜಿಲ್ಲೆಗಳ ಮೇಲೆ ಜೆಡಿಎಸ್ ಪರಮೋಚ್ಚ ನಾಯಕರೂ ಆದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರ ಪಾರುಪತ್ಯ ಮೊದಲಿನಿಂದಲೂ ಇದೆ. ಹಾಗೆಯೇ ಅದನ್ನು ರುಜುವಾತು ಮಾಡುತ್ತಾ […]

ಬೆಂಗಳೂರು- ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿರಿಯ ಪಂಚಮಸಾಲಿ ಸ್ವಾಮೀಜಿಗಳು ಈ ವಿಚಾರದಲ್ಲಿ ’ಪಂಚಮಸಾಲಿ ಸಮುದಾಯ ಸಿಎಂ ಬೊಮ್ಮಾಯಿ ಮೇಲೆ ನಂಬಿಕೆ ಕಳೆದುಕೊಂಡಿದೆ’ ಎಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಭಾರೀ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮುದಾಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲಿನ […]

      ಬೆಂಗಳೂರು- ಚಿಲುಮೆ ಸಂಸ್ಥೆ ನಡೆಸಿದ ಮತದಾರರ ಮಾಹಿತಿ ಕಳವು ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಯಾಸ್ಟ್ ಮಾಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಈ ಕುರಿತು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಮೂಲಕ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳ್ಳತನದ ಆರೋಪವನ್ನು ಡೈವರ್ಟ್ ಮಾಡಲು ಹೊರಟಿದ್ದೀರಾ? ಭಯೋತ್ಪಾದಕ ಎಲ್ಲಿಂದ ಬಂದ? ಘಟನೆ ಆದ […]

ಬೆಂಗಳೂರು- ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ 2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು […]

  ಬೆಂಗಳೂರು- ಕರ್ನಾಟಕದ ವಿವಿಧ ರೈಲು ಯೋಜನೆಗಳಿಗೆ ಒಂದು ವರ್ಷದಲ್ಲಿ ದಾಖಲೆ ಮೊತ್ತದ ಅನುದಾನ ನೀಡಲಾಗಿದೆ. ಲೋಕಸಭೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನಲ್ಲಿ ರಾಜ್ಯದ ರೈಲು ಯೋಜನೆಗಳಿಗೆ 6091 ಕೋಟಿ ರೂ. ಹಣ ನೀಡಲಾಗಿದೆ. 2009-14ಕ್ಕೆ ಹೋಲಿಕೆ ಮಾಡಿದರೆ ಇದು ೬ ಪಟ್ಟು ಹೆಚ್ಚಾಗಿದೆ ಎಂದು ಸಚಿವರು ಸಂಸದರ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಈ ಉತ್ತರದ ಮೂಲಕ ರಾಜ್ಯದ ರೈಲು […]

    ಧಾರವಾಡ- ಕರ್ನಾಟಕದಲ್ಲೂ ಗುಜರಾತ್ ಮಾದರಿ ಚುನಾವಣೆ ಮಾಡಲು ನಮ್ಮ ಆಗ್ರಹ ಇದ್ದೇ ಇದೆ. 8  ವರ್ಷಗಳಿಂದ ನಾನು ಪ್ರಧಾನಿಗಳ ಜೊತೆ ಕೆಲಸ ಮಾಡಿದ್ದೇನೆ. ಗುಜರಾತ್ ಮಾದರಿ ಚುನಾವಣೆ ಒಳ್ಳೆಯ ಸಂಗತಿಯಾಗಿದೆ. ಕರ್ನಾಟಕದಲ್ಲೂ ಅದನ್ನೇ ಪಾಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧಾರವಾಡದಲ್ಲಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಟಿಕೆಟ್ ಕಟ್ ಮಾಡುವುದರ ಬಗ್ಗೆ ನಾನು ಈಗಲೇ ಹೇಳುವುದಿಲ್ಲ. ಯಾವಾಗ ಟಿಕೆಟ್ ಹಂಚುವ ಸಂದರ್ಭ ಬರುತ್ತದೆಯೋ […]

  ಅಹಮದಾಬಾದ್/ಶಿಮ್ಲಾ- ಗುಜರಾತ್‌ನ ಇತಿಹಾಸದಲ್ಲೇ ಶೇ.50ಕ್ಕಿಂತಲೂ ಹೆಚ್ಚಿನ ಮತ ಪಡೆದ ಬಿಜೆಪಿ 156 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಬಹುಮತದೊಂದಿಗೆ ಸತತ 7ನೇ ಬಾರಿ ಗೆಲುವು ಸಾಧಿಸಿ ದಾಖಲೆ ನಿರ್ಮಿಸಿದೆ. ಅತ್ತ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪೈಪೋಟಿ ಸರಳ ಬಹುಮತ ಗಳಿಸುವಲ್ಲಿ ಯಶಸ್ವಿಯಾಗಿದೆ. ಗುಜರಾತ್‌ನಲ್ಲಿ 182 ಸ್ಥಾನಗಳಿಗೆ ಡಿ.1 ಮತ್ತು 5ರಂದು ಚುನಾವಣೆ ನಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಮ್ಯಾಜಿಕ್ ನಂಬರ್ 92 ಸ್ಥಾನಗಳನ್ನು ಪಡೆಯಬೇಕಿತ್ತು. […]

ಬೆಂಗಳೂರು- ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಆರ್ ರಮೇಶ್ ಈಗ ಭೂ ಹಗರಣದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ತಮ್ಮ ಆಪ್ತನಿಂದ ತಮಗಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಒಡೆತನದ ಸ್ವತ್ತನ್ನು ಡಿ-ನೋಟಿಫೀಕೇಷನ್ ಮಾಡಿಸಿಕೊಂಡಿದ್ದಾರೆಂದು ಅರೋಪಿಸಿರುವ ರಮೇಶ್ ಈ ಸಂಬಂಧ ಸಿದ್ದರಾಮಯ್ಯ, ಅವರ ಆಪ್ತ-ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. […]

  ಬೆಳಗಾವಿ-ಗಡಿ ವಿವಾದದಲ್ಲಿ ಮತ್ತೆ ತಗಾದೆ ತೆಗೆದ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ನೋಂದಣಿಯ ಲಾರಿಗಳು ಮತ್ತು ಟ್ರಕ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದು ಪ್ರತಿಭಟನೆ ನಡೆಸಿದರು. ಬೆಳಗಾವಿಯ ಹೀರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಮಹಾರಾಷ್ಟ್ರ ನೋಂದಣಿ ಲಾರಿಗಳನ್ನು ತಡೆದ ಕರವೇ ಮತ್ತಿತ್ತರ ಕನ್ನಡ ಸಂಘಟನೆ ಕಾರ್ಯಕರ್ತರು ಲಾರಿಗಳ ಮೇಲೇರಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. […]

ಬೆಂಗಳೂರು- ೬೭ನೇ ಕನ್ನಡ ರಾಜ್ಯೋತ್ಸವದಂದೇ ನಟ ಯುವರತ್ನ, ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ರಾಜ್ಯದ ಅತ್ಯುನ್ನತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ಇದು ಅಪ್ಪು ಅಭಿಮಾನಿಗಳಲ್ಲಿ ಅಪಾರ ಸಂತೋಷಕ್ಕೆ ಕಾರಣವಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ನಟ […]

Wordpress Social Share Plugin powered by Ultimatelysocial