ಬೆಂಗಳೂರು-ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು […]

ಚಿಕ್ಕಬಳ್ಳಾಪುರ- ವಾರಾಂತ್ಯದಲ್ಲಿ ನಂದಿ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಹಾಕಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ. ಮಾರ್ಚ್ 26ರಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೇಳಿದೆ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಂದಿ ಗಿರಿಧಾಮದ ಅಭಿವೃದ್ಧಿ ಬಗ್ಗೆ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ, “ಈ ವಾರಾಂತ್ಯದಿಂದಲೇ ಪ್ರವೇಶ ಪತ್ರ ಪಡೆದ ಪ್ರವಾಸಿಗರಿಗೆ ನಂದಿ ಗಿರಿಧಾಮ ಪ್ರವಾಸಕ್ಕೆ ಅನುಮತಿ ನೀಡಲಾಗಿದೆ” ಎಂದರು. ನಂದಿ ಗಿರಿಧಾಮಕ್ಕೆ […]

ಹಾಸನ: ಒಂದೇ ಲಾರಿ ನಾಲ್ಕು ಬೈಕ್ ಗಳಿಗೆ ಡಿಕ್ಕಿಯಾಗಿರುವ ಅಪಘಾತ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಪಘಾತವಾದ ಸ್ಥಳದಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಕ್ಕಳ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 4 ಬೈಕ್‌ಗಳಿಗೆ ಲಾರಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಬಳಿಕ ಬೈಕುಗಳನ್ನು ಸುಮಾರು 2 ಕಿ. ಮೀ. ದೂರದವರೆಗೆ ಲಾರಿ ಎಳೆದುಕೊಂಡು ಹೋಗಿದೆ. ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ […]

ಬೆಳಗಾವಿ: ಕರ್ನಾಟಕದಲ್ಲಿ ಪುಂಡಾಟಿಕೆ ನಡೆಸಿದ ಪ್ರಮುಖರನ್ನು ಬಂಧಿಸಲಾಗಿದ್ದು, ಬೆಳಗಾವಿ ಪ್ರಕರಣವನ್ನು ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಶಿಕಲಾ ಜೊಲ್ಲೆಗೆ ಸೇರಿದ ಕಟ್ಟಡ ಕಾಮಗಾರಿ ಮೇಲೆ ಶಿವಸೇನೆ ಹಾಗೂ ಎಂಇಎಸ್ ದಾಳಿ ನಡೆಸಿದ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಯಾವುದೇ ರೀತಿಯ ಕೆಲಸವನ್ನು ಮಾಡುತ್ತಿರಲಿಲ್ಲ. ತಪ್ಪು ಮಾಡದವರನ್ನು ಬಂಧಿಸಿ ಸುಮ್ಮನಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಪ್ರಮುಖರನ್ನು ಬಂಧಿಸಿ ಪ್ರಕರಣವನ್ನು […]

ಸಿನಿಮಾ : ಮೈಸೂರಿನ ಹೊಸತಂಡದ ಹೊಸಪ್ರಯತ್ನ “ಆ್ಯಂಗರ್”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ ರೂಪೇಶ್ ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಹಾಡುಗಳನ್ನು ಲೋಕಾರ್ಪಣೆ ಮಾಡಿ, ಶುಭ ಕೋರಿದರು. ರೊಮ್ಯಾಂಟಿಕ್ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಚಿತ್ರದ ನಾಯಕ ಬಾಲ್ಯದ ಕೆಲವು ಘಟನೆಗಳಿಂದ ತುಂಬಾ ಮುಂಗೋಪಿಯಾಗಿರುತ್ತಾನೆ. ನಾಯಕಿಯ ಪ್ರವೇಶದ ನಂತರ ಆತನ […]

ಚೆನ್ನೈ: ಐಫೋನ್ ಕಾರ್ಖಾನೆಯಲ್ಲಿ ಕಲುಷಿತ ಆಹಾರವನ್ನು ಸೇವಿಸಿ 150 ಮಂದಿ ಅಸ್ವಸ್ಥರಾಗಿದ್ದಾರೆ. ಆ್ಯಪಲ್ ಕಂಪನಿಯ ಐಫೋನ್ ತಯಾರಿಸುವ ಫಾಕ್ಸ್‌ಕಾನ್ ಕಂಪನಿಯಲ್ಲಿ ನೀಡಿದ ಕಲುಷಿತ ಆಹಾರ ಸೇವೆಯಿಂದಾಗಿ ಅಸ್ವಸ್ಥಗೊಂಡು, 150ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 256 ನ್ನು ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದ್ದು, 159 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ 155 ಮಂದಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ವಿಚಾರವಾಗಿ ಕೋಪಗೊಂಡ ಸಿಬ್ಬಂದಿ ಬೆಂಗಳೂರು-ಚೆನ್ನೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಸ್ವಸ್ಥರನ್ನು […]

Wordpress Social Share Plugin powered by Ultimatelysocial