ಕೇದಾರನಾಥ- ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಇಂದು ಉತ್ತರಾಖಂಡದ ಕೇದಾರನಾಥ ಬಳಿ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾರು ಚಟ್ಟಿ ಬಳಿ ಹೆಲಿಕಾಪ್ಟರ್ ಪತನವಾಗಿದ್ದು, ಇದುವರೆಗೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಕಾಶಿಯಿಂದ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅದರಲ್ಲಿ ಪೈಲಟ್ ಸೇರಿದಂತೆ ಒಟ್ಟು 6 ಮಂದಿ ಇದ್ದರು. ಯಾತ್ರಾರ್ಥಿಗಳೊಂದಿಗೆ ಹೆಲಿಕಾಪ್ಟರ್ ಮುಂದೆ ಸಾಗಿದಾಗ ಗರುಡಚಟ್ಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನೆಲಕ್ಕೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಕುಳಿತಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿ ಮಳೆಯು ತುಂಬಾ ಜೋರಾಗುತ್ತಿದ್ದು, ಇದ್ದಕ್ಕಿದ್ದಂತೆ 15 ನಿಮಿಷಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ಒದಗಿಸಿದ್ದಾರೆ. ನಮ್ಮ ವಿಮಾನವನ್ನೂ ಇಲ್ಲಿ ನಿಲ್ಲಿಸಲಾಗಿದ್ದು, ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ. ಅಕ್ಟೋಬರ್ 21-22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಗೆ ಬರುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ. ಹಲವಾರು ಅಭಿವೃದ್ಧಿ ಯೋಜನೆಗಳ ಅವಲೋಕನಕ್ಕಾಗಿ ಪ್ರಧಾನಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಇದಾದ ಬಳಿಕ ಕೇದ್ರನಾಥಕ್ಕೆ ಭೇಟಿ ನೀಡಲಿದ್ದು, ಬದರಿನಾಥಕ್ಕೂ ತೆರಳಲಿದ್ದಾರೆ. ಅಕ್ಟೋಬರ್ 21 ರಂದು ಕೇದಾರನಾಥ ದರ್ಶನದ ನಂತರ ರಾತ್ರಿ ಇಲ್ಲಿಯೇ ತಂಗುವ ಪ್ರಧಾನಿ ಅಕ್ಟೋಬರ್ 22 ರಂದು ಬದರಿನಾಥ ದರ್ಶನಕ್ಕೆ ತೆರಳಲಿದ್ದಾರೆ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರ ದಂಡೇ ಇದೆ. ಕೇದಾರನಾಥ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದಾರೆ. ಎರಡು ವರ್ಷಗಳ ಬಳಿಕ ಕೊರೊನಾ ಭೀತಿಯಿಂದ ಮುಕ್ತಿ ಪಡೆದ ಭಕ್ತರಿಗೆ ಚಾರ್‌ಧಾಮ್ ಯಾತ್ರೆ ಆರಂಭವಾಗಿದೆ. ಇನ್ನೇನು ಚಾರ್ ಧಾಮ ಯಾತ್ರೆ ಹಿಮಪಾದದಿಂದ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಆರು ತಿಂಗಳ ಸಮಯದಲ್ಲಿ ಕೇದಾರನಾಥಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ.
ಈ ಹಿಂದೆ ಇಂಥದ್ದೇ ಘಟನೆ
ಮೇ 31 ರಂದು ಉತ್ತರಾಖಂಡ್ ರಾಜ್ಯದ ಸುಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಹೆಲಿಕಾಪ್ಟರ್ ಅಪಘಾತ ಆದ ಘಟನೆ ನಡೆದಿತ್ತು. ಅಪಘಾತದಲ್ಲಿ ಯಾವುದೇ ಪ್ರಯಾಣಾಪಾಯ ಸಂಭವಿಸಿರಲಿಲ್ಲ. ಖಾಸಗಿ ವಿಮಾನಯಾನ ಸಂಸ್ಥೆಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು ಘಟನೆಯ ವಿಡಿಯೋ ವೈರಲ್ ಆಗಿತ್ತು. ಖಾಸಗಿ ವಿಮಾನಯಾನ ಹೆಲಿಕಾಪ್ಟರ್ ಕೇದಾರನಾಥ ಹೆಲಿಪ್ಯಾಡ್‌ನಲ್ಲಿ ಇಳಿಯುವಾಗ ಹಠಾತ್ ನಿಯಂತ್ರಣವನ್ನು ಕಳೆದುಕೊಂಡಿತು. ಆದರೆ ನಂತರ ಪೈಲಟ್ ಪರಿಸ್ಥಿತಿಯನ್ನು ಹತೋಟಿಗೆ ತಂದರು ಮತ್ತು ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು. ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.