ಕೇವಲ 11 ದಿನಗಳಲ್ಲಿ 3.14 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ: ಆರೋಗ್ಯ ಇಲಾಖೆ


ದೇಶದಲ್ಲಿ ಪ್ರಾರಂಭವಾದ 15-18 ವರ್ಷದ ಮಕ್ಕಳ ಲಸಿಕೀಕರಣ ಯಶಸ್ವಿಯಾಗಿ ನಡೆಯುತ್ತಿದ್ದು, ಕೇವಲ 11 ದಿನಗಳಲ್ಲಿ 3.14 ಕೋಟಿಗೂ ಹೆಚ್ಚು ಮಕ್ಕಳು ಲಸಿಕೆ ಪಡೆದಿದ್ದಾರೆ.
ಈ ತಿಂಗಳ ಅಂತ್ಯದೊಳಗೆ ಸರ್ಕಾರ ಶೇ.80ರಿಂದ 85ರಷ್ಟು ಮಕ್ಕಳಿಗೆ ಅಂದ್ರೆ 7.40 ಕೋಟಿ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ. ಈಗಿನ ವರದಿಯಂತೆ 3,14,84,269 ಮಕ್ಕಳು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ.


ಈ ಬಗ್ಗೆ ಟ್ವೀಟ್‌ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಭಾರತದಲ್ಲಿ ಯುವಕರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಉತ್ಸಾಹವಿದೆ ಎಂದು ಶ್ಲಾಘಿಸಿದ್ದಾರೆ.
ಮಕ್ಕಳಿಗೆ ಲಸಿಕೆ ನೀಡಲು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದೆ. ಮಕ್ಕಳಿಗೆ ಲಸಿಕೆ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಾಕ್ಸಿನ್‌ನ ಹೆಚ್ಚುವರಿ ಲಸಿಕೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Please follow and like us:

Leave a Reply

Your email address will not be published.

Next Post

ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಸಿಎಂ ಬಸವರಾಜ ಬೊಮ್ಮಾಯಿ

Fri Jan 14 , 2022
ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಆವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. […]
Wordpress Social Share Plugin powered by Ultimatelysocial