ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ, ೫ ಲಕ್ಷ ದಂಡ

ಬೆಂಗಳೂರು- ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ 2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ ೯೦ ದಿನ ಕಾಲಾವಕಾಶ ಕೋರಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್ ದಂಡದ ರುಚಿ ತೋರಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಹಿಗ್ಗಾಮುಗ್ಗಾ ತರಾಟೆ:
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸರ್ಕಾರದ ಪರ ವಕೀಲರು ಮತ್ತೆ 12 ವಾರ ಕಾಲಾವಕಾಶ ಕೇಳಿದದರು. ಅದಕ್ಕೆ ಸಿಟ್ಟಾದ ಸಿಜೆ, ಅರ್ಜಿ ಸಲ್ಲಿಕೆಯಾಗಿ ಒಂದು ವರ್ಷ ಕಳೆದಿದೆ, ಈವರೆಯೂ ಮೂರನೇ ಬಾರಿ ಕಾಲಾವಕಾಶ ಕೋರಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನ ಆದೇಶಗಳನ್ನು ಪಾಲಿಸಬೇಕೆಂಬ ಉದ್ದೇಶವಿಲ್ಲವೇ? ಎಂದು ನ್ಯಾಯಪೀಠ ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ಕಳೆದ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಖುದ್ದು ಹಾಜರಾಗಿ 12 ವಾರ ಕಾಲಾವಕಾಶ ಕೋರಿದ್ದಾರೆ. ಅವರ ಮನವಿಯ ಮೇಲೆ ಭರವಸೆಯಿಟ್ಟು ನ್ಯಾಯಾಲಯ ಕಾಲಾವಾಶ ನೀಡಿದೆ. ಆದರೂ, ಈವರೆಗೂ ಒಂದಿಷ್ಟೂ ಕೆಲಸ ಮಾಡಿಲ್ಲ. ಅರ್ಜಿಗೆ ದಾಖಲೆಗಳನ್ನು ಸೇರಿಸಲಾಗುತ್ತಿದ್ದು, ಮತ್ತೆ ಮತ್ತೆ ಕಾಲಾವಕಾಶ ಕೋರಲಾಗುತ್ತಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು. ಅಲ್ಲದೆ, ಬರುವ ಜನವರಿ ೨೮ರ ಅಂತ್ಯದ ವೇಳೆಗೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ಫೆ. 2ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಪ್ರಕರಣದ ಹಿನ್ನೆಲೆ:

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ-2021 ಅನ್ನು ಅಸಂವಿಧಾನ ಎಂಬುದಾಗಿ ಘೋಷಿಸಿ ರದ್ದುಪಡಿಸಬೇಕು. ಚುನಾವಣಾ ಆಯೋಗವು ಈಗಾಗಲೇ ಪ್ರಕಟಿಸಿರುವ ಕರಡು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣಾ ಪ್ರಕ್ರಿಯೆ ಮುಂದುವರಿಸಬೇಕು. ಅಂತಿಮ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಪ್ರಕಟಿಸಿ, ಶೀಘ್ರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.

Please follow and like us:

Leave a Reply

Your email address will not be published.

Next Post

Privates toward Flirt4Free is really as reduced since the $0

Thu Dec 15 , 2022
Privates toward Flirt4Free is really as reduced since the $0 The private speak shows, as mentioned before all of the were 2-way audio and video, and usually – habits actually promote Tip Managed suggests, allowing you to tip and you will control the newest babe’s Lovense otherwise OhMiBod remote triggered […]
Wordpress Social Share Plugin powered by Ultimatelysocial